Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:13 - ಕನ್ನಡ ಸತ್ಯವೇದವು C.L. Bible (BSI)

13 ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಗರುಡ, ಬೆಟ್ಟದ ಹದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಇವುಗಳ ಮಾಂಸವನ್ನು ತಿನ್ನಬಾರದು; ಇವು ಹೇಯವಾಗಿರಬೇಕು, ಯಾವವಂದರೆ - ಗರುಡ, ಬೆಟ್ಟದ ಹದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಿಷಿದ್ಧವಾದ ಈ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಾರದು: ಗರುಡ, ಬೆಟ್ಟದ ಹದ್ದು, ಕ್ರೌಂಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:13
18 ತಿಳಿವುಗಳ ಹೋಲಿಕೆ  

ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಹೆಣವಿದ್ದೆಡೆ ರಣಹದ್ದುಗಳು ಬಂದು ಸೇರುತ್ತವೆ.


“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.


“ಶತ್ರುವು ಮೋವಾಬಿನ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಆಹಾರವನು ಒದಗಿಸುವವರಾರು ತಾಯಿ ಕಾಗೆಗೆ ಅದರ ಹಸಿದ ಮರಿಗಳು ಕೊಕ್ಕೆತ್ತಿ ದೇವರಿಗೆ ಮೊರೆಯಿಡುವಾಗ?


ಆ ದಾರಿ ತಿಳಿಯದು ಯಾವ ಹದ್ದಿಗೂ ಅದು ಬಿದ್ದಿಲ್ಲ ಯಾವ ಗಿಡುಗದ ಕಣ್ಣಿಗೂ.


ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು.


ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ ಪರೆಪರೆಯಾದ ಮೈಯೂ ಇಲ್ಲವೋ ಅವು ನಿಮಗೆ ಹೇಯವಾಗಿರಬೇಕು.


ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಕೊಕ್ಕರೆಯ ರೆಕ್ಕೆಗಳಂತಿರುವ ರಭಸವಾದ ರೆಕ್ಕೆಗಳುಳ್ಳ ಇಬ್ಬರು ಮಹಿಳೆಯರು ಬರುತ್ತಿರುವುದನ್ನು ಕಂಡೆನು. ಅವರು ಕೊಳಗದ ಪಾತ್ರೆಯನ್ನು ಎತ್ತಿಕೊಂಡು ಹಾರಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು