Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:2 - ಕನ್ನಡ ಸತ್ಯವೇದವು C.L. Bible (BSI)

2 “ನೀವು ಇಸ್ರಯೇಲರಿಗೆ ತಿಳಿಸಬೇಕಾದ ವಿಷಯಗಳು ಇವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಇಸ್ರಾಯೇಲ್ಯರಿಗೆ ಹೀಗೆ ಹೇಳಬೇಕು- ಭೂವಿುಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೇಳಬೇಕಾದದ್ದೇನೆಂದರೆ, ನೀವು ಈ ಪಶುಗಳನ್ನು ತಿನ್ನಬಹುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:2
22 ತಿಳಿವುಗಳ ಹೋಲಿಕೆ  

ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.


ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.


ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದದ್ದಾಗಿದ್ದರೆ ಅಶುದ್ಧವಾಗುವುದು. ಪಾನದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.


ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ,


ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.


ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಗರುಡ, ಬೆಟ್ಟದ ಹದ್ದು,


ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ, ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.


ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ ಒಂಟೆ ಮೆಲುಕುಹಾಕುವಂಥದ್ದಾದರೂ ಅದಕ್ಕೆ ಸೀಳು ಗೊರಸು ಇಲ್ಲ. ಆದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದು ತಿಳಿಯಬೇಕು.


ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಹೀಗೆಂದು ಆಜ್ಞಾಪಿಸಿದರು:


ಭೂಮಿಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಈ ಕೆಳಕಂಡವುಗಳ ಮಾಂಸವನ್ನು ನೀವು ತಿನ್ನಬಹುದು: ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು