Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:29 - ಕನ್ನಡ ಸತ್ಯವೇದವು C.L. Bible (BSI)

29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು. ಯಾವವಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:29
19 ತಿಳಿವುಗಳ ಹೋಲಿಕೆ  

ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.


ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


“ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಮರುಭೂಮಿಯನ್ನೂ ಅದರಿಸುವೆನು.


“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.


ಹಲ್ಲಿ - ಅಂಗೈ ಆಸರೆ ಪಡೆವ ಪ್ರಾಣಿ, ಆದರೂ ಅರಮನೆಗಳಲ್ಲಿ ವಾಸ ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು