Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:32 - ಕನ್ನಡ ಸತ್ಯವೇದವು C.L. Bible (BSI)

32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವದೋ ಆ ವಸ್ತುವು ಅಶುದ್ಧವಾಗಿರುವದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವದು; ತರುವಾಯ ಶುದ್ಧಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:32
12 ತಿಳಿವುಗಳ ಹೋಲಿಕೆ  

ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವುದೋ ಅವರು ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಂಜೆಯವರೆಗೂ ಅವನು ಮಡಿಗೆಟ್ಟವನಾಗಿರಬೇಕು.


ಮುಚ್ಚಳ ಹಾಕಿ ಕಟ್ಟದಿರುವ ಎಲ್ಲ ಪಾತ್ರೆಗಳು ಕೂಡ ಮೈಲಿಗೆಯಾಗಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು