Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:42 - ಕನ್ನಡ ಸತ್ಯವೇದವು C.L. Bible (BSI)

42 ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:42
12 ತಿಳಿವುಗಳ ಹೋಲಿಕೆ  

ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.


ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.


ನೀವು ಅಂತ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆಮಾಡಿಕೊಂಡು ಅಶುದ್ಧರಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು