Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:44 - ಕನ್ನಡ ಸತ್ಯವೇದವು C.L. Bible (BSI)

44 ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಯಾಕಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:44
34 ತಿಳಿವುಗಳ ಹೋಲಿಕೆ  

“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ನೀವು ಅಂತ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆಮಾಡಿಕೊಂಡು ಅಶುದ್ಧರಾಗಬಾರದು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.


“ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ಈಗ ನನ್ನ ಆಜ್ಞೆಗಳನ್ನೇ ಗಮನದಲ್ಲಿಟ್ಟು ಅವುಗಳನ್ನು ಅನುಸರಿಸಬೇಕು. ಹೀಗೆ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕು.


“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


“ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.


ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು