Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:7 - ಕನ್ನಡ ಸತ್ಯವೇದವು C.L. Bible (BSI)

7 ಹಂದಿಯ ಗೊರಸು ಸೀಳಿದೆ. ಆದರೂ ಅದು ಮೆಲುಕು ಹಾಕುವುದಿಲ್ಲ. ಆದ್ದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:7
11 ತಿಳಿವುಗಳ ಹೋಲಿಕೆ  

“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.


ಹಂದಿಯ ಗೊರಸು ಸೀಳಿದ್ದರೂ ಅದು ಮೆಲುಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.


ನಿರ್ಗತಿಕನಾದ ಅವನು ಹೋಗಿ, ಆದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ.


ಕೂಡಲೆ ಪಿಶಾಚಿಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಆ ಹಂದಿಗಳ ಹಿಂಡು ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ ಸರೋವರಕ್ಕೆ ಬಿದ್ದು ನೀರುಪಾಲಾಯಿತು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಭೂಮಿಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಈ ಕೆಳಕಂಡವುಗಳ ಮಾಂಸವನ್ನು ನೀವು ತಿನ್ನಬಹುದು: ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಮೊಲ ಮೆಲುಕುಹಾಕುವಂಥದ್ದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದು ನಿಮಗೆ ಅಶುದ್ಧ.)


ಇಂಥವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣವನ್ನು ಮುಟ್ಟಬಾದರು. ಅವುಗಳನ್ನು ಅಶುದ್ಧವೆಂದೆಣಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು