Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:8 - ಕನ್ನಡ ಸತ್ಯವೇದವು C.L. Bible (BSI)

8 ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕುರಿಯನ್ನು ಕೊಡುವದಕ್ಕೆ ಗತಿಯಿಲ್ಲದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನೂ ದೋಷಪರಿಹಾರಕ್ಕಾಗಿ ಒಂದನ್ನೂ ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:8
14 ತಿಳಿವುಗಳ ಹೋಲಿಕೆ  

“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.


ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.


ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.


ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.


ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.


ಸರ್ವೇಶ್ವರ ಸ್ವಾಮಿ ಮೋಶೆ ಆರೋನರಿಗೆ ಹೇಳಿದ್ದೇನೆಂದರೆ;


ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.


“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು