ಯಾಜಕಕಾಂಡ 13:25 - ಕನ್ನಡ ಸತ್ಯವೇದವು C.L. Bible (BSI)25 ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿಯಾಗಲಿ ಇದ್ದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು. ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಹೊಳಪಾದ ಕಲೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆಯಿಂದ ಒಡೆದ ಚರ್ಮರೋಗವಾಗಿರುವುದು. ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಚರ್ಮವ್ಯಾಧಿಯಾಗಿದೆ. ಅಧ್ಯಾಯವನ್ನು ನೋಡಿ |