Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:34 - ಕನ್ನಡ ಸತ್ಯವೇದವು C.L. Bible (BSI)

34 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಇಸುಬನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಏಳನೆಯ ದಿನದಲ್ಲಿ ಯಾಜಕನು ತಿರಿಗಿ ಆ ದದ್ದನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:34
6 ತಿಳಿವುಗಳ ಹೋಲಿಕೆ  

ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಸಂಶಯಪಡುವವರಿಗೆ ಸಹೃದಯದಿಂದ ನೆರವಾಗಿರಿ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಆಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವಂಥಾದ್ದು ಆಗಿರುವುದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು..


ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಇಸುಬು ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.


ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಇಸುಬು ಚರ್ಮದಲ್ಲಿ ಹರಡಿಕೊಂಡರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು