ಯಾಜಕಕಾಂಡ 13:55 - ಕನ್ನಡ ಸತ್ಯವೇದವು C.L. Bible (BSI)55 ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಿನ ಕಡೆಯಿಂದಾಗಲಿ ಕೆಳಗಿನ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಣ ಕಡೆಯಿಂದಾಗಲಿ ಕೆಳಗಣ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಆ ಬಳಿಕ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲವಾದರೂ ನೀವು ಬಟ್ಟೆಯನ್ನು ಅಥವಾ ತೊಗಲನ್ನು ಸುಟ್ಟುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿ |