Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:58 - ಕನ್ನಡ ಸತ್ಯವೇದವು C.L. Bible (BSI)

58 ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ತೊಳೆದ ನಂತರ ಆ ಮಚ್ಚೆ ಕಾಣದೆ ಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಆ ಬಟ್ಟೆಯನ್ನಾಗಲಿ ಹಾಸನ್ನಾಗಲಿ ಹೊಕ್ಕನ್ನಾಗಲಿ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಆದರೆ, ತೊಳೆದ ನಂತರ ಬೂಷ್ಟು ತಿರುಗಿ ಬಾರದಿದ್ದರೆ, ಆ ತೊಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ನೀನು ತೊಳೆದ ಮೇಲೆ ಆ ಬೂಜು ಯಾವ ವಸ್ತುವಿನಿಂದ ಹೊರಟು ಹೋಯಿತೋ, ಆ ಬಟ್ಟೆಯನ್ನೂ, ಹಾಸನ್ನೂ, ಹೊಕ್ಕನ್ನೂ ಇಲ್ಲವೆ ಚರ್ಮದ ಯಾವುದೇ ಸಾಮಗ್ರಿಗಳನ್ನೂ ಎರಡನೆಯ ಸಾರಿ ತೊಳೆಯಬೇಕು. ಆಗ ಅದು ಶುದ್ಧವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:58
10 ತಿಳಿವುಗಳ ಹೋಲಿಕೆ  

ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು.


ನಾರಿನ ಅಥವಾ ಉಣ್ಣೆಯ ನೆಯಿಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,


ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.


ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು