Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:6 - ಕನ್ನಡ ಸತ್ಯವೇದವು C.L. Bible (BSI)

6 ಆ ಏಳು ದಿನಗಳಾದ ಮೇಲೆ ಯಾಜಕನು ಮತ್ತೆ, ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಕೇವಲ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಳು ದಿನಗಳಾದ ಮೇಲೆ ಯಾಜಕನು ತಿರಿಗಿ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:6
23 ತಿಳಿವುಗಳ ಹೋಲಿಕೆ  

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ.


ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ಪರಲೋಕದಲ್ಲಿರುವ ನೀವು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ಅವರಾದರೋ ದ್ರೋಹಿಗಳು, ಮಕ್ಕಳೆನಿಸಿಕೊಳ್ಳಲು ಅಯೋಗ್ಯರು ವಕ್ರಬುದ್ಧಿಯುಳ್ಳವರು, ಮೂರ್ಖಜಾತಿಯವರು.


ಒಬ್ಬ ವ್ಯಕ್ತಿಯ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ, ಹೊಳೆಯುವ ಮಚ್ಚೆಯಾಗಲಿ ಕಾಣಿಸಿಕೊಂಡು ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕ ಆರೋನನ ಬಳಿಗೆ, ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.


ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡ ನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು