Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:8 - ಕನ್ನಡ ಸತ್ಯವೇದವು C.L. Bible (BSI)

8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:8
9 ತಿಳಿವುಗಳ ಹೋಲಿಕೆ  

ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸಬೇಕು. ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಮಚ್ಚೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಒಬ್ಬ ವ್ಯಕ್ತಿಯ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ, ಹೊಳೆಯುವ ಮಚ್ಚೆಯಾಗಲಿ ಕಾಣಿಸಿಕೊಂಡು ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕ ಆರೋನನ ಬಳಿಗೆ, ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡ ನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.


ಕುಷ್ಠರೋಗದ ಚಿಹ್ನೆಗಳು ಯಾವ ವ್ಯಕ್ತಿಯಲ್ಲಾದರೂ ಕಾಣಬಂದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.


“ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು