ಯಾಜಕಕಾಂಡ 14:12 - ಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿ |
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.