Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಯಾಜಕನು ಆ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಜಕನು ಪ್ರಾಯಶ್ಚಿತ್ತ ಬಲಿಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಮತ್ತು ಯಾಜಕನು ಅದನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿನ ಮೇಲೆಯೂ, ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:14
16 ತಿಳಿವುಗಳ ಹೋಲಿಕೆ  

ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ಮಿಕ್ಕ ರಕ್ತವನ್ನು ಬಲಿಪೀಠದ ನಾಲ್ಕು ಕಡೆಗಳಿಗೂ ಸುರಿ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಅದಲ್ಲದೆ, ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಬಲಿಯಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ದಹನಬಲಿಯಾಗಿ ವಧಿಸಬೇಕು.


ಪ್ರಾಯಶ್ಚಿತ್ತ ಬಲಿಯ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು