Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:19 - ಕನ್ನಡ ಸತ್ಯವೇದವು C.L. Bible (BSI)

19 ಅದಲ್ಲದೆ, ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಬಲಿಯಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ದಹನಬಲಿಯಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವದಕ್ಕೆ [ಆ ಕುರಿಯನ್ನು] ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು [ಆ ಎರಡನೆಯ ಟಗರು ಮರಿಯನ್ನು] ಸರ್ವಾಂಗಹೋಮಕ್ಕಾಗಿ ವಧಿಸಬೇಕು. ಅವನು ಆ ಸರ್ವಾಂಗಹೋಮವನ್ನೂ ನೈವೇದ್ಯವನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಯಾಜಕನು ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು. ತರುವಾಯ ಅವನು ದಹನಬಲಿಯ ಪ್ರಾಣಿಯನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:19
8 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಆಗ ಯಾಜಕನು ಆ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು