Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:2 - ಕನ್ನಡ ಸತ್ಯವೇದವು C.L. Bible (BSI)

2 ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯದಲ್ಲಿ ಅನುಸರಿಸಬೇಕಾದ ಕ್ರಮ ಇದು: ಅವನನ್ನು ಯಾಜಕನಿಗೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡಿಸಬೇಕಾದ ಕ್ರಮ ಹೇಗಂದರೆ - ಅವನನ್ನು ಯಾಜಕನಿಗೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ ಅನುಸರಿಸತಕ್ಕ ನಿಯಮಗಳು ಯಾವುವೆಂದರೆ: “ಚರ್ಮರೋಗವಿದ್ದ ವ್ಯಕ್ತಿಯನ್ನು ಯಾಜಕನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:2
9 ತಿಳಿವುಗಳ ಹೋಲಿಕೆ  

ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು.


ಆಕಸ್ಮಿಕವಾಗಿ ಯಾರಾದರೂ ಅವನ ಬಳಿಯಲ್ಲೇ ಸತ್ತು, ಅವನು ಪ್ರತಿಷ್ಠಿಸಿಕೊಂಡಿದ್ದ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಂದು ಅಂದರೆ ಶುದ್ಧೀಕರಣ ದಿನದಂದು ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -


“ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು