Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:30 - ಕನ್ನಡ ಸತ್ಯವೇದವು C.L. Bible (BSI)

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೊ ಅದನ್ನು ಅವನು ಸಮರ್ಪಿಸಬೇಕು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:30
8 ತಿಳಿವುಗಳ ಹೋಲಿಕೆ  

ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು.


ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.


ಪಾರಿವಾಳದ ಮರಿಗಳಲ್ಲಿಯಾಗಲಿ ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಿಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು