Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:34 - ಕನ್ನಡ ಸತ್ಯವೇದವು C.L. Bible (BSI)

34 “ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:34
28 ತಿಳಿವುಗಳ ಹೋಲಿಕೆ  

ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ತರುವಾಯ ನೀವು ಹಿಂದಿರುಗಿ ಬರಬಹುದು. ಆಗ ಸರ್ವೇಶ್ವರನ ಮುಂದೆ, ಇಸ್ರಯೇಲರ ಮುಂದೆ ನಿರ್ದೋಷಿಗಳಾಗುವಿರಿ, ಮಾತ್ರವಲ್ಲ ಈ ಪ್ರದೇಶ ಸರ್ವೇಶ್ವರನ ಸನ್ನಿಧಿಯಲ್ಲೇ ನಿಮಗೆ ಸೇರಿದ ಸೊತ್ತಾಗುವುದು.


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


ಇಗೋ, ಸರ್ವೇಶ್ವರ ಆಜ್ಞಾಪಿಸಲು, ಕುಸಿದುಬೀಳುವುವು ಮಹಾಸೌಧಗಳು, ನುಚ್ಚುನೂರಾಗುವುವು ಚಿಕ್ಕಚಿಕ್ಕ ಮನೆಗಳು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲು ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.


“ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು:


ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.


“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದ ನಂತರ


ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧ ಸನ್ನದ್ಧರಾಗಿ ಕಾನಾನ್ ನಾಡಿಗೆ ಹೊರಡುತ್ತೇವೆ. ಜೋರ್ಡನ್ ನದಿಯ ಈಚೆಯೇ ನಮಗೆ ಆಸ್ತಿ ದೊರಕಬೇಕು,” ಎಂದು ಹೇಳಿದರು.


“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.


“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ -


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠರೋಗದ ಗುರುತು,


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು