Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:4 - ಕನ್ನಡ ಸತ್ಯವೇದವು C.L. Bible (BSI)

4 ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸಜೀವವಾದ ಎರಡು ಶುದ್ಧಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ ಶುದ್ಧ ಮಾಡಿಸಿಕೊಳ್ಳುವವನಿಗೋಸ್ಕರ ಸಜೀವವಾದ ಎರಡು ಶುದ್ಧ ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್‍ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಶುದ್ಧಮಾಡಿಕೊಳ್ಳುವವನಿಗೋಸ್ಕರ ಜೀವವುಳ್ಳ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳುವಂತೆ ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:4
11 ತಿಳಿವುಗಳ ಹೋಲಿಕೆ  

ಯಾಜಕನು ದೇವದಾರು ಮರದ ಕಟ್ಟಿಗೆಯನ್ನು ಹಿಸ್ಸೋಪ್ ಗಿಡದ ಬರಲನ್ನು ಮತ್ತು ರಕ್ತವರ್ಣದ ದಾರವನ್ನು ತೆಗೆದುಕೊಂಡು ಆ ಆಕಳನ್ನು ದಹಿಸುವ ಬೆಂಕಿಯಲ್ಲಿ ಹಾಕಬೇಕು.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು.


ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.


ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.


ಆ ಪಕ್ಷಿಗಳಲ್ಲಿ ಒಂದನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ, ಮತ್ತೊಂದು ಪಕ್ಷಿಯನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು