Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:40 - ಕನ್ನಡ ಸತ್ಯವೇದವು C.L. Bible (BSI)

40 ಆ ಗುರುತುಗಳು ಇರುವ ಕಲ್ಲುಗಳನ್ನು ತೆಗಿಸಿಬಿಟ್ಟು ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆ ಗುರುತುಗಳು ಇರುವ ಕಲ್ಲುಗಳನ್ನು ತೆಗಿಸಿಬಿಟ್ಟು ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆಗ ಯಾಜಕನು ಬೂಷ್ಟು ಇರುವ ಕಲ್ಲುಗಳನ್ನು ಒಡೆದುಹಾಕಿ ಬಿಸಾಡಬೇಕೆಂದು ಆಜ್ಞಾಪಿಸಬೇಕು. ಅವರು ಆ ಕಲ್ಲುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಬೂಜುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:40
19 ತಿಳಿವುಗಳ ಹೋಲಿಕೆ  

ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಆದರೆ ನಿನ್ನಲ್ಲಿ ಒಂದು ಒಳ್ಳೆಯ ಗುಣವಿದೆ. ನಾನು ದ್ವೇಷಿಸುವಂತೆ ನೀನು ಸಹ ನಿಕೊಲಾಯಿತರ ದುಷ್ಕೃತ್ಯಗಳನ್ನು ದ್ವೇಷಿಸುತ್ತಿರುವೆ.


ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಏಳನೆಯ ದಿನದಲ್ಲಿ ಯಾಜಕನು ಬಂದು ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ


ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ, ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.


ಅನಂತರ ತನ್ನ ವಸ್ತ್ರಗಳನ್ನು ಬದಲಾಯಿಸಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು