Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:42 - ಕನ್ನಡ ಸತ್ಯವೇದವು C.L. Bible (BSI)

42 ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬಳಿಕ ಆ ವ್ಯಕ್ತಿಯು ಗೋಡೆಗಳಲ್ಲಿ ಹೊಸ ಕಲ್ಲುಗಳನ್ನು ಇಡಿಸಿ ಹೊಸ ಮಡ್ಡಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:42
13 ತಿಳಿವುಗಳ ಹೋಲಿಕೆ  

ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ, ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.


ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು