Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:46 - ಕನ್ನಡ ಸತ್ಯವೇದವು C.L. Bible (BSI)

46 ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಮುಚ್ಚಲ್ಪಟ್ಟಿರುವ ಆ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಆ ಮನೆಯು ಮುಚ್ಚಿರುವ ಕಾಲದಲ್ಲೆಲ್ಲಾ ಅದರೊಳಗೆ ಯಾವನಾದರೂ ಹೋದರೆ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:46
14 ತಿಳಿವುಗಳ ಹೋಲಿಕೆ  

ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವುವುಗಳೆಲ್ಲಾ ನಿಮಗೆ ಅಶುದ್ಧವಾಗಿರುವುವು. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವುದೋ ಅವರು ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.


ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು