Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:57 - ಕನ್ನಡ ಸತ್ಯವೇದವು C.L. Bible (BSI)

57 ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಇವುಗಳಲ್ಲಿ ಶುದ್ಧಾಶುದ್ಧ ಭೇದವನ್ನು ತಿಳಿಸುವ ವಿಧಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಅವುಗಳ ಶುದ್ಧಾಶುದ್ಧ ಬೇಧವನ್ನು ಬೋಧಿಸುವ ನಿಯಮಗಳು ಇವೇ. ಚರ್ಮರೋಗಗಳ ಹಾಗೂ ಬೂಜಿನ ವಿಷಯದಲ್ಲಿರುವ ನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:57
7 ತಿಳಿವುಗಳ ಹೋಲಿಕೆ  

ದೇವರಿಗೆ ಮೀಸಲಾದ ವಸ್ತ್ರಗಳಾವುವು; ಸಲ್ಲದ ವಸ್ತ್ರಗಳಾವುವು; ಶುದ್ಧ, ಆಶುದ್ಧವಾದುವುಗಳಾವುವು ಎಂಬುದನ್ನು ನೀವು ವಿವೇಚಿಸಬೇಕು.


“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:


ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು