ಯಾಜಕಕಾಂಡ 15:10 - ಕನ್ನಡ ಸತ್ಯವೇದವು C.L. Bible (BSI)10 ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಯಾವನಾದರೂ ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ಯಾವದೇ ವಸ್ತುಗಳನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ವಸ್ತುಗಳನ್ನು ತೆಗೆದುಕೊಂಡುಹೋಗುವ ಯಾವನಾದರೂ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನ ಕೆಳಗಿರುವ ಯಾವುದಾದರೂ ವಸ್ತುವನ್ನು ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರಬೇಕು, ಅವುಗಳಲ್ಲಿ ಯಾವುದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |