Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:18 - ಕನ್ನಡ ಸತ್ಯವೇದವು C.L. Bible (BSI)

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:18
15 ತಿಳಿವುಗಳ ಹೋಲಿಕೆ  

ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.


“ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು.


ಆಕೆ ಆಗ ತಾನೆ ಋತುಸ್ನಾನ ಮಾಡಿಕೊಂಡಿದ್ದಳು. ಆಕೆಯನ್ನು ಕರೆದುತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಅನಂತರ ಆಕೆ ತನ್ನ ಮನೆಗೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು