Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:19 - ಕನ್ನಡ ಸತ್ಯವೇದವು C.L. Bible (BSI)

19 “ಮಹಿಳೆಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಂಜೆಯವರೆಗೆ ಅಶುದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದವರೆಗೆ ಅಶುದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ ‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:19
10 ತಿಳಿವುಗಳ ಹೋಲಿಕೆ  

“ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.


ಆಮೇಲೆ ಆಕೆ ಪೂರ್ಣಶುದ್ಧಳಾಗಲು ಮೂವತ್ತುಮೂರು ದಿನಗಳವರೆಗೆ ಕಾದಿರಬೇಕು. ಅದು ಮುಗಿಯುವ ತನಕ ಆಕೆ ದೇವರ ವಸ್ತುಗಳನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.


ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.


ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು