Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:21 - ಕನ್ನಡ ಸತ್ಯವೇದವು C.L. Bible (BSI)

21 ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:21
9 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.


ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು