Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:13 - ಕನ್ನಡ ಸತ್ಯವೇದವು C.L. Bible (BSI)

13 ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:13
16 ತಿಳಿವುಗಳ ಹೋಲಿಕೆ  

ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.


“ಸುಗಂಧದ್ರವ್ಯಗಳಿಂದ ಧೂಪ ಹಾಕುವುದಕ್ಕಾಗಿ ಜಾಲೀಮರದ ಒಂದು ವೇದಿಕೆಯನ್ನು ಮಾಡಿಸು.


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.


ಆಗ ಸರ್ವೇಶ್ವರ ಯಾರನ್ನು ಮೆಚ್ಚುತ್ತಾರೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ಅಧಿಕವಾಗಿರುವುದು ನಿಮ್ಮ ವರ್ತನೆಯೆ!”


“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು