Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿವಿುಕಿಸಿ ಕೃಪಾಸನದ ಎದುರಾಗಿಯೂ ಏಳು ಬಾರಿ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಹೋರಿಯ ರಕ್ತದಿಂದ ಸ್ವಲ್ಪ ತೆಗೆದುಕೊಂಡು, ಕರುಣಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು, ಕರುಣಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:14
14 ತಿಳಿವುಗಳ ಹೋಲಿಕೆ  

ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.


ಅಂತೆಯೇ ಗುಡಾರದ ಮೇಲೂ ದೇವಾರಾಧನೆಗೆ ಬೇಕಾದ ಎಲ್ಲಾ ಪೂಜಾಸಾಮಗ್ರಿಗಳ ಮೇಲೂ ಆ ರಕ್ತವನ್ನು ಚಿಮುಕಿಸಿದನು.


ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಯೇಲರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ತರುವಾಯ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದತ್ತ ಏಳುಸಾರಿ ಚಿಮುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು