ಯಾಜಕಕಾಂಡ 16:15 - ಕನ್ನಡ ಸತ್ಯವೇದವು C.L. Bible (BSI)15 ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |