Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:18 - ಕನ್ನಡ ಸತ್ಯವೇದವು C.L. Bible (BSI)

18 ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಆ ಹೋತನ ರಕ್ತದಲ್ಲಿಯೂ ಸ್ವಲ್ಪ ಸ್ವಲ್ಪ ತೆಗೆದುಕೊಂಡು ವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:18
14 ತಿಳಿವುಗಳ ಹೋಲಿಕೆ  

ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದೊಳಗೆ ಹೋಗಕೂಡದು. ಹಾಗೆ ತನ್ನ ಹಾಗು ಮನೆತನದವರ ಪರವಾಗಿ ಮತ್ತು ಇಸ್ರಯೇಲರ ಇಡೀ ಸಮಾಜದ ಪರವಾಗಿ ಪ್ರಾಯಶ್ಚಿತ್ತ ಮಾಡುವನು.


ಇದಲ್ಲದೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬಲಿಪೀಠದ ನಾಲ್ಕು ಕೊಂಬುಗಳಿಗೆ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೆ ಹಾಗು ಸುತ್ತಣ ದಿಂಡಿಗೆ ಹಚ್ಚಿ ಬಲಿಪೀಠದ ದೋಷವನ್ನು ಪರಿಹರಿಸಿ, ಅದನ್ನು ಶುದ್ಧಿಮಾಡು.


ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.


ಆಗ ಯಾಜಕನು ಆ ದೋಷಪರಿಹಾರಕ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಬಲಿಪೀಠದ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು