Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:2 - ಕನ್ನಡ ಸತ್ಯವೇದವು C.L. Bible (BSI)

2 ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:2
26 ತಿಳಿವುಗಳ ಹೋಲಿಕೆ  

ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.


ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.


ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.


ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ಪರಮ ಪವಿತ್ರವಾದ ವಸ್ತುಗಳ ಹತ್ತಿರಕ್ಕೆ ಬರುವಾಗ ಅವರು ಸಾಯದಂತೆ ಎಚ್ಚರಿಕೆ ವಹಿಸಿರಿ. ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಅವರವರ ಕೆಲಸಗಳನ್ನು ಹೊರಬೇಕಾದ ಹೊರೆಗಳನ್ನು ಗೊತ್ತುಮಾಡಬೇಕು.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.


ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ದಂಡು ಹೊರಡುವಾಗ ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಗರ್ಭಗುಡಿಯನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಬೇಕು.


ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.


ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು