Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:20 - ಕನ್ನಡ ಸತ್ಯವೇದವು C.L. Bible (BSI)

20 ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಪೀಠ, ಇವುಗಳಿಗೋಸ್ಕರ ಆರೋನನು ದೋಷಪರಿಹಾರ ಮಾಡಿ ಮುಗಿಸಿದ ಮೇಲೆ, ಆ ಸಜೀವವಾದ ಹೋತವನ್ನು ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ವೇದಿ ಇವುಗಳಿಗೋಸ್ಕರ ದೋಷಪರಿಹಾರಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:20
12 ತಿಳಿವುಗಳ ಹೋಲಿಕೆ  

ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಯೇಲರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು