Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:24 - ಕನ್ನಡ ಸತ್ಯವೇದವು C.L. Bible (BSI)

24 ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನ್ನ ಹಾಗು ಜನಸಮೂಹದ ಪರವಾಗಿ ದಹನಬಲಿಗಳನ್ನು ಸಮರ್ಪಿಸಿ ತನ್ನ ಮತ್ತು ಜನರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಅವನು ಹೊರಗೆ ಬಂದು ತನಗೋಸ್ಕರವೂ ಜನಸಮೂಹಕ್ಕೋಸ್ಕರವೂ ಸರ್ವಾಂಗಹೋಮಗಳನ್ನು ಸಮರ್ಪಿಸಿ ತನಗೋಸ್ಕರವಾಗಿಯೂ ಜನರಿಗೋಸ್ಕರವಾಗಿಯೂ ದೋಷಪರಿಹಾರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:24
14 ತಿಳಿವುಗಳ ಹೋಲಿಕೆ  

ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು.


“ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗು ಶೋಭೆ ಸಿಗುವಂತೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಹಾಗು ಪೇಟಗಳನ್ನು ಮಾಡಿಸು.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ಅವನು ದೋಷಪರಿಹಾರಕ ಬಲಿಪ್ರಾಣಿಗಳ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು.


ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು