Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:34 - ಕನ್ನಡ ಸತ್ಯವೇದವು C.L. Bible (BSI)

34 ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:34
14 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.


ಬದಲಿಗೆ, ಪ್ರತಿವರ್ಷವೂ ಸಮರ್ಪಿಸಲಾಗುವ ಬಲಿಯರ್ಪಣೆಗಳು ಪಾಪನಿವಾರಣೆ ಆಗದ್ದನ್ನು ಜ್ಞಾಪಕಕ್ಕೆ ತರುತ್ತವೆ.


‘ಉಪವಾಸ ಆಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನ ನೀವು ಯಾವ ದುಡಿಮೆಯನ್ನು ಮಾಡದೆ ದೇವಾರಾಧನೆಗಾಗಿ ಸಭೆ ಕೂಡಬೇಕು.


ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:


ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು