Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:4 - ಕನ್ನಡ ಸತ್ಯವೇದವು C.L. Bible (BSI)

4 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಮುಂಡಾಸವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವದಕ್ಕೆ ಮುಂಚೆ ಸ್ನಾನಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:4
23 ತಿಳಿವುಗಳ ಹೋಲಿಕೆ  

ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನ್ನ ಹಾಗು ಜನಸಮೂಹದ ಪರವಾಗಿ ದಹನಬಲಿಗಳನ್ನು ಸಮರ್ಪಿಸಿ ತನ್ನ ಮತ್ತು ಜನರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.


“ಅದಲ್ಲದೆ ಆರೋನನನ್ನು ಮತ್ತು ಅವನ ಮಕ್ಕಳನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸು.


ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.


ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.


ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟು,


ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ನೆರವೇರಿಸಬೇಕು.


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.


ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ.


ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು