Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:5 - ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರ ಸಮಾಜದಿಂದ ದೋಷಪರಿಹಾರಕ ಬಲಿಗಾಗಿ ಎರಡು ಹೋತಗಳನ್ನೂ ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರ ಜನಸಮೂಹದಿಂದ ದೋಷಪರಿಹಾರಕಯಜ್ಞಕ್ಕಾಗಿ ಎರಡು ಹೋತಗಳನ್ನೂ ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆರೋನನು ಇಸ್ರೇಲರಿಂದ ಪಾಪಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:5
14 ತಿಳಿವುಗಳ ಹೋಲಿಕೆ  

ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.


ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.


ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು