Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:6 - ಕನ್ನಡ ಸತ್ಯವೇದವು C.L. Bible (BSI)

6 ಆರೋನನು ತನಗಾಗಿ ತಂದ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪಶ್ಚಾತ್ತಾಪ ವಿಧಿಯನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆರೋನನು ತನಗೋಸ್ಕರವಾಗಿ ತಂದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:6
12 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಈ ರೀತಿಯಾಗಿ ಬರಬೇಕು. ದೋಷಪರಿಹಾರಕ ಬಲಿಗಾಗಿ ಹೋರಿಯನ್ನೂ ದಹನಬಲಿಗಾಗಿ ಟಗರನ್ನೂ ತರಬೇಕು.


ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು