ಯಾಜಕಕಾಂಡ 17:10 - ಕನ್ನಡ ಸತ್ಯವೇದವು C.L. Bible (BSI)10 “ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |