Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:11 - ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:11
24 ತಿಳಿವುಗಳ ಹೋಲಿಕೆ  

ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಆರೋನನು ತನಗಾಗಿ ದೋಷಪರಿಹಾರಕ ಬಲಿಯ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.


ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಎಂದೇ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಮಾಡುವ ಅನ್ಯದೇಶೀಯವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಸರ್ವೇಶ್ವರ ಇಸ್ರಯೇಲರಿಗೆ ಆಜ್ಞಾಪಿಸಿದ್ದಾರೆ.


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


“ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು