Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:13 - ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರಲ್ಲಾಗಲಿ ಅವರ ನಡುವೆ ವಾಸಮಾಡುವ ಅನ್ಯದೇಶೀಯರಲ್ಲಾಗಲಿ ಯಾರಾದರು ಬೇಟೆಮಾಡಿ ತಿನ್ನಬಹುದಾದ ಪ್ರಾಣಿಯನ್ನು ಅಥವಾ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿದು ಮಣ್ಣಿನಿಂದ ಮುಚ್ಚಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯಾವನಾದರೂ ಒಂದು ಪ್ರಾಣಿಯನ್ನು ಬೇಟೆಯಾಡಿದರೆ ಅಥವಾ ಪಕ್ಷಿಯನ್ನು ಹಿಡಿದರೆ, ಅವನು ಅದರ ರಕ್ತವನ್ನು ನೆಲದ ಮೇಲೆ ಸುರಿದು ಅದನ್ನು ಮಣ್ಣಿನಿಂದ ಮುಚ್ಚಿಬಿಡಬೇಕು. ಅವನು ಇಸ್ರೇಲನಾದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾದರೂ ಹಾಗೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:13
9 ತಿಳಿವುಗಳ ಹೋಲಿಕೆ  

ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.


ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಪಕ್ಷಿಯದಾಗಲಿ, ಪ್ರಾಣಿಯದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು.


ಪೊಡವಿಯೇ, ನನ್ನ ನೆತ್ತರನ್ನು ನೀ ಮುಚ್ಚಬೇಡ ನಾನು ಮಾಡುತ್ತಿರುವ ಮೊರೆಯನ್ನು ನಿಲ್ಲಿಸಬೇಡ.


ಎಂದೇ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಮಾಡುವ ಅನ್ಯದೇಶೀಯವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಸರ್ವೇಶ್ವರ ಇಸ್ರಯೇಲರಿಗೆ ಆಜ್ಞಾಪಿಸಿದ್ದಾರೆ.


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು