Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:14 - ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲ್ಯರಿಗೆ - ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಇದನ್ನು ಯಾಕೆ ಮಾಡಬೇಕೆಂದರೆ, ಮಾಂಸದಲ್ಲಿ ರಕ್ತವು ಇನ್ನೂ ಇದ್ದರೆ, ಅದರ ಪ್ರಾಣವು ಇನ್ನೂ ಮಾಂಸದಲ್ಲಿ ಇದೆ. ಆದ್ದರಿಂದ ನಾನು ಇಸ್ರೇಲರಿಗೆ ಈ ಅಪ್ಪಣೆಯನ್ನು ಕೊಡುತ್ತೇನೆ. ರಕ್ತದಿಂದ ಕೂಡಿರುವ ಮಾಂಸವನ್ನು ತಿನ್ನಬಾರದು. ಯಾವನಾದರೂ ರಕ್ತ ಭೋಜನ ಮಾಡಿದರೆ, ಅವನು ತನ್ನ ಜನರಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:14
6 ತಿಳಿವುಗಳ ಹೋಲಿಕೆ  

ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.


“ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು