Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರಲ್ಲಿ ಯಾರಾದರು ಹೋರಿಯನ್ನಾಗಲಿ, ಕುರಿಯನ್ನಾಗಲಿ, ಆಡನ್ನಾಗಲಿ ಬಲಿಕೊಡುವಾಗ ಅದನ್ನು ಸರ್ವೇಶ್ವರನಿಗೆ ಸಮರ್ಪಿಸಲು ದೇವಗುಡಾರದ ಬಾಗಿಲಿಗೆ ತರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಯನ್ನಾಗಲಿ ಆಡನ್ನಾಗಲಿ ಕೊಯ್ಯುವಾಗ ಅದನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ಆತನ ಗುಡಾರದ ಬಾಗಲಿಗೆ ತಾರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಮರಿಯನ್ನಾಗಲಿ ಹೋತವನ್ನಾಗಲಿ ಪಾಳೆಯದೊಳಗೆ ಅಥವಾ ಪಾಳೆಯದ ಹೊರಗೆ ವಧಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:3
11 ತಿಳಿವುಗಳ ಹೋಲಿಕೆ  

“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


“ಇದಲ್ಲದೆ ನೀನು ಅವರಿಗೆ ಹೀಗೆಂದು ಆಜ್ಞಾಪಿಸು: ಇಸ್ರಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಿ ಆಗಲಿ ಯಾವನಾದರು ದಹನಬಲಿಯನ್ನು ಆಥವಾ ಬೇರೆ ವಿಧವಾದ ಬಲಿದಾನ ಮಾಡುವಾಗ


“ನೀನು ಆರೋನನಿಗೂ ಅವನ ಮಕ್ಕಳಿಗೂ ಹಾಗು ಇಸ್ರಯೇಲರಿಗೂ ಹೇಳಬೇಕಾದುದು ಇದು:


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.


ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು