ಯಾಜಕಕಾಂಡ 18:26 - ಕನ್ನಡ ಸತ್ಯವೇದವು C.L. Bible (BSI)26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಿಸುವ ಅನ್ಯದೇಶೀಯರಲ್ಲಾಗಲಿ ಯಾರೂ ಇಂಥ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನೂ ಮಾಡದೆ ಎಲ್ಲರೂ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ನಿಮ್ಮ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನಾದರೂ ನಡಿಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯಜನರಿಗಾಗಿ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿ |