ಯಾಜಕಕಾಂಡ 18:3 - ಕನ್ನಡ ಸತ್ಯವೇದವು C.L. Bible (BSI)3 ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ವಾಸವಾಗಿದ್ದ ಐಗುಪ್ತದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್‍ದೇಶದ ಆಚರಣೆಗಳನ್ನೂ ನೀವು ಅನುಸರಿಸಬಾರದು; ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು. ಅಧ್ಯಾಯವನ್ನು ನೋಡಿ |