Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು; ನನ್ನ ವಿಧಿಗಳನ್ನೇ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ವಿಧಿಗಳನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:4
15 ತಿಳಿವುಗಳ ಹೋಲಿಕೆ  

“ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.


ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಿಸುವ ಅನ್ಯದೇಶೀಯರಲ್ಲಾಗಲಿ ಯಾರೂ ಇಂಥ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನೂ ಮಾಡದೆ ಎಲ್ಲರೂ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು