Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:7 - ಕನ್ನಡ ಸತ್ಯವೇದವು C.L. Bible (BSI)

7 “ನಿನ್ನ ತಂದೆಯೊಡನೇ ಆಗಲಿ, ತಾಯಿಯೊಡನೆ ಆಗಲಿ ಸಂಭೋಗಿಸಕೂಡದು, ತಾಯಿಯೊಡನೆ ಎಷ್ಟು ಮಾತ್ರವೂ ಸಂಗಮಿಸಬಾರದು. ಆಕೆ ನಿನ್ನ ಹೆತ್ತ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಾಯಿಯನ್ನು ಎಷ್ಟು ಮಾತ್ರವೂ ಸಂಗವಿುಸಬಾರದು; ಆಕೆ ಹೆತ್ತವಳಲ್ಲವೆ; ಸಂಗವಿುಸಿದರೆ ತಂದೆಗೆ ಮಾನಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:7
7 ತಿಳಿವುಗಳ ಹೋಲಿಕೆ  

ಯಾವನಾದರು ಮಲತಾಯಿಯನ್ನು ಕೂಡಿದರೆ ಅವನು ತಂದೆಗೆ ಮಾನಭಂಗ ಮಾಡಿದಂತಾಯಿತು. ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಆ ಶಿಕ್ಷೆಗೆ ಅವರೇ ಕಾರಣರು.


ನಿನ್ನವರು ತಮ್ಮ ತಂದೆಯವರಿಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.


ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳವರೊಡನೆ ಮೈಗೂಡಿಸಕೂಡದು; ನಾನೇ ಸರ್ವೇಶ್ವರ.


‘ಅವರು, ‘ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಎಂದೇ ಬಾ ತಂದೆಗೆ ದ್ರಾಕ್ಷಾರಸವನ್ನು ಕುಡಿಸೋಣ; ಅವನ ಸಂಗಡ ಮಲಗಿಕೊಂಡು ತಂದೆಯಿಂದಲಾದರೂ ಸಂತಾನ ಪಡೆದುಕೊಳ್ಳೋಣ,“ ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು