Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:15 - ಕನ್ನಡ ಸತ್ಯವೇದವು C.L. Bible (BSI)

15 “ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:15
20 ತಿಳಿವುಗಳ ಹೋಲಿಕೆ  

ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.


“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು


“ನ್ಯಾಯ ವಿಚಾರಣೆ, ತೂಕ ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಅವರಿಗೆ ಮುಖದಾಕ್ಷಿಣ್ಯ ತೋರುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?


ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು